30ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
31ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
32ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
33ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
34ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.