Text copied!
Bibles in Kannada

ಮಾರ್ಕ 6:30-41 in Kannada

Help us?

ಮಾರ್ಕ 6:30-41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
31 ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
32 ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
33 ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
35 ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
36 ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
37 ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
38 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
39 ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
40 ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
41 ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
ಮಾರ್ಕ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019