Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 6

ಮಾರ್ಕ 6:4-14

Help us?
Click on verse(s) to share them!
4ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
7ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
8“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
9ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.
10ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
11ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
12ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.
13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
14ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.

Read ಮಾರ್ಕ 6ಮಾರ್ಕ 6
Compare ಮಾರ್ಕ 6:4-14ಮಾರ್ಕ 6:4-14