Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 7

ಮಾರ್ಕ 7:13-27

Help us?
Click on verse(s) to share them!
13ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
14ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
15ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
16“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
17ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
18ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
19ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
20ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
21ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
22ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
23ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
24ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
25ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
26ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
27ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.

Read ಮಾರ್ಕ 7ಮಾರ್ಕ 7
Compare ಮಾರ್ಕ 7:13-27ಮಾರ್ಕ 7:13-27