Text copied!
Bibles in Kannada

ಮಾರ್ಕ 7:27-37 in Kannada

Help us?

ಮಾರ್ಕ 7:27-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
28 ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
29 ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
30 ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
32 ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
33 ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
35 ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
36 ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
37 ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
ಮಾರ್ಕ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019