Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 7

ಮಾರ್ಕ 7:3-17

Help us?
Click on verse(s) to share them!
3ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
4ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
5ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
6ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
7ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
8ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
9ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
10‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
11ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
12ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
13ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
14ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
15ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
16“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
17ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು

Read ಮಾರ್ಕ 7ಮಾರ್ಕ 7
Compare ಮಾರ್ಕ 7:3-17ಮಾರ್ಕ 7:3-17