Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 9

ಮಾರ್ಕ 9:32-43

Help us?
Click on verse(s) to share them!
32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
37“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
38ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
39ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
40ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
42ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
43ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

Read ಮಾರ್ಕ 9ಮಾರ್ಕ 9
Compare ಮಾರ್ಕ 9:32-43ಮಾರ್ಕ 9:32-43