Text copied!
Bibles in Kannada

ಮಾರ್ಕ 9:33-39 in Kannada

Help us?

ಮಾರ್ಕ 9:33-39 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
37 “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
38 ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
39 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
ಮಾರ್ಕ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019