Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 10

ಯಾಜ 10:1-4

Help us?
Click on verse(s) to share them!
1ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
2ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
3ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
4ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.

Read ಯಾಜ 10ಯಾಜ 10
Compare ಯಾಜ 10:1-4ಯಾಜ 10:1-4