Text copied!
Bibles in Kannada

ಯಾಜ 10:1-6 in Kannada

Help us?

ಯಾಜ 10:1-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
2 ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
3 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
5 ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
6 ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
ಯಾಜ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019