Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 10

ಯಾಜ 10:2-9

Help us?
Click on verse(s) to share them!
2ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
3ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
4ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
5ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
6ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
7ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
8ಯೆಹೋವನು ಆರೋನನೊಂದಿಗೆ ಮಾತನಾಡಿ,
9“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.

Read ಯಾಜ 10ಯಾಜ 10
Compare ಯಾಜ 10:2-9ಯಾಜ 10:2-9