Text copied!
Bibles in Kannada

ಯಾಜ 11:14-24 in Kannada

Help us?

ಯಾಜ 11:14-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕ್ರೌಂಚ, ಹದ್ದು,
15 ಸಕಲವಿಧವಾದ ಗಿಡುಗ,
16 ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
17 ಗೂಬೆ, ಹೆಗ್ಗೂಬೆ, ನೀರುಕಾಗೆ,
18 ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
19 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
20 “‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
21 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
22 ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
24 “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019