Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 11

ಯಾಜ 11:21-31

Help us?
Click on verse(s) to share them!
21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
22ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
23ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
24“‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
25ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
26ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
27ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
28ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
29“‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
30ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
31ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

Read ಯಾಜ 11ಯಾಜ 11
Compare ಯಾಜ 11:21-31ಯಾಜ 11:21-31