Text copied!
Bibles in Kannada

ಯಾಜ 11:23-42 in Kannada

Help us?

ಯಾಜ 11:23-42 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
24 “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
26 ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
28 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
31 ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
37 ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
39 “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
41 “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
42 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019