Text copied!
Bibles in Kannada

ಯಾಜ 11:28-42 in Kannada

Help us?

ಯಾಜ 11:28-42 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
31 ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
32 ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
34 ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
35 ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
37 ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
39 “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
40 ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
41 “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
42 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019