Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 11

ಯಾಜ 11:31-36

Help us?
Click on verse(s) to share them!
31ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
32ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
33ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
34ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
35ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
36ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.

Read ಯಾಜ 11ಯಾಜ 11
Compare ಯಾಜ 11:31-36ಯಾಜ 11:31-36