Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 11

ಯಾಜ 11:7-22

Help us?
Click on verse(s) to share them!
7ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
8ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
9“‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
10ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
11ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
12ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
13“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
14ಕ್ರೌಂಚ, ಹದ್ದು,
15ಸಕಲವಿಧವಾದ ಗಿಡುಗ,
16ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
17ಗೂಬೆ, ಹೆಗ್ಗೂಬೆ, ನೀರುಕಾಗೆ,
18ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
19ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
20“‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
22ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.

Read ಯಾಜ 11ಯಾಜ 11
Compare ಯಾಜ 11:7-22ಯಾಜ 11:7-22