Text copied!
Bibles in Kannada

ಯಾಜ 11:9-18 in Kannada

Help us?

ಯಾಜ 11:9-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
10 ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
11 ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
12 ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
13 “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
14 ಕ್ರೌಂಚ, ಹದ್ದು,
15 ಸಕಲವಿಧವಾದ ಗಿಡುಗ,
16 ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
17 ಗೂಬೆ, ಹೆಗ್ಗೂಬೆ, ನೀರುಕಾಗೆ,
18 ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
ಯಾಜ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019