Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 12

ಯಾಜ 12:2-7

Help us?
Click on verse(s) to share them!
2“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
3ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.
4ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
5ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
6“‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
7ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.

Read ಯಾಜ 12ಯಾಜ 12
Compare ಯಾಜ 12:2-7ಯಾಜ 12:2-7