Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 13

ಯಾಜ 13:14-26

Help us?
Click on verse(s) to share them!
14ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
15ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
16ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
17ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
18“ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
19ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
20ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
21ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
22ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
23ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
24“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
25ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
26ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.

Read ಯಾಜ 13ಯಾಜ 13
Compare ಯಾಜ 13:14-26ಯಾಜ 13:14-26