Text copied!
Bibles in Kannada

ಯಾಜ 13:14-26 in Kannada

Help us?

ಯಾಜ 13:14-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
15 ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
16 ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
17 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
18 “ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
19 ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
20 ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
21 ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
22 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
24 “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
25 ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
26 ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
ಯಾಜ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019