Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 13

ಯಾಜ 13:28-40

Help us?
Click on verse(s) to share them!
28ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.
29“ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
30ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
31ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
32ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
33ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
34ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
35ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
36ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
37ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
38“ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
39ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
40“ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.

Read ಯಾಜ 13ಯಾಜ 13
Compare ಯಾಜ 13:28-40ಯಾಜ 13:28-40