Text copied!
Bibles in Kannada

ಯಾಜ 13:3-10 in Kannada

Help us?

ಯಾಜ 13:3-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.
5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
6 ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
7 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
9 “ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
10 ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
ಯಾಜ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019