Text copied!
Bibles in Kannada

ಯಾಜ 13:30-34 in Kannada

Help us?

ಯಾಜ 13:30-34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
31 ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
32 ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
34 ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
ಯಾಜ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019