Text copied!
Bibles in Kannada

ಯಾಜ 13:43-57 in Kannada

Help us?

ಯಾಜ 13:43-57 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
44 ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
45 “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
46 ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
47 “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
48 ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,
49 ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
50 ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
51 ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
52 ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
54 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
55 ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
56 ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
57 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
ಯಾಜ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019