Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:2-7

Help us?
Click on verse(s) to share them!
2“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
3ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
4ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
6“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
7ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

Read ಯಾಜ 14ಯಾಜ 14
Compare ಯಾಜ 14:2-7ಯಾಜ 14:2-7