Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:20-26

Help us?
Click on verse(s) to share them!
20ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
21“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
22ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
23ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
24ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
25ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
26ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,

Read ಯಾಜ 14ಯಾಜ 14
Compare ಯಾಜ 14:20-26ಯಾಜ 14:20-26