Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:30-38

Help us?
Click on verse(s) to share them!
30ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
31ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
32“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
33ಯೆಹೋವನು ಮೋಶೆ ಮತ್ತು ಆರೋನರಿಗೆ,
34“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
35ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
36ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
37ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
38ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.

Read ಯಾಜ 14ಯಾಜ 14
Compare ಯಾಜ 14:30-38ಯಾಜ 14:30-38