Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:37-49

Help us?
Click on verse(s) to share them!
37ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
38ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
39ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
40ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
41ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
43“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
44ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
45ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
46ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
47ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.

Read ಯಾಜ 14ಯಾಜ 14
Compare ಯಾಜ 14:37-49ಯಾಜ 14:37-49