Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:41-50

Help us?
Click on verse(s) to share them!
41ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
43“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
44ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
45ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
46ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
47ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
50ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,

Read ಯಾಜ 14ಯಾಜ 14
Compare ಯಾಜ 14:41-50ಯಾಜ 14:41-50