Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:14-19

Help us?
Click on verse(s) to share them!
14ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
16“‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
18ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
19“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

Read ಯಾಜ 15ಯಾಜ 15
Compare ಯಾಜ 15:14-19ಯಾಜ 15:14-19