Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:14-24

Help us?
Click on verse(s) to share them!
14ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
16“‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
18ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
19“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
20ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
21ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
22ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
23ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
24ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.

Read ಯಾಜ 15ಯಾಜ 15
Compare ಯಾಜ 15:14-24ಯಾಜ 15:14-24