Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:15-31

Help us?
Click on verse(s) to share them!
15ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
16“‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
18ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
19“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
20ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
21ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
22ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
23ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
24ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
25“‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
26ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
27ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
28ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
30ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
31“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.

Read ಯಾಜ 15ಯಾಜ 15
Compare ಯಾಜ 15:15-31ಯಾಜ 15:15-31