Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:2-10

Help us?
Click on verse(s) to share them!
2“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
3ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
4ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
5ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
6ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
7ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
8ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
9ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
10ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

Read ಯಾಜ 15ಯಾಜ 15
Compare ಯಾಜ 15:2-10ಯಾಜ 15:2-10