Text copied!
Bibles in Kannada

ಯಾಜ 15:2-15 in Kannada

Help us?

ಯಾಜ 15:2-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
13 “‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
ಯಾಜ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019