Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:27-33

Help us?
Click on verse(s) to share them!
27ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
28ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
30ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
31“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
32“‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
33ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು.

Read ಯಾಜ 15ಯಾಜ 15
Compare ಯಾಜ 15:27-33ಯಾಜ 15:27-33