Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:5-11

Help us?
Click on verse(s) to share them!
5ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
6ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
7ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
8ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
9ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
10ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
11ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

Read ಯಾಜ 15ಯಾಜ 15
Compare ಯಾಜ 15:5-11ಯಾಜ 15:5-11