Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 15

ಯಾಜ 15:7-15

Help us?
Click on verse(s) to share them!
7ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
8ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
9ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
10ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
11ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
13“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
14ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.

Read ಯಾಜ 15ಯಾಜ 15
Compare ಯಾಜ 15:7-15ಯಾಜ 15:7-15