Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 16

ಯಾಜ 16:1-6

Help us?
Click on verse(s) to share them!
1ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
2“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
3ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
4ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
5ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
6ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.

Read ಯಾಜ 16ಯಾಜ 16
Compare ಯಾಜ 16:1-6ಯಾಜ 16:1-6