Text copied!
Bibles in Kannada

ಯಾಜ 18:15-28 in Kannada

Help us?

ಯಾಜ 18:15-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
16 ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
17 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
18 ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
19 “‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
20 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
21 “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
22 “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
24 “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
26 ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
27 ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
ಯಾಜ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019