Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 18

ಯಾಜ 18:3-10

Help us?
Click on verse(s) to share them!
3ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.
4ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
5ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
6“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
7ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
8ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
9ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
10ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.

Read ಯಾಜ 18ಯಾಜ 18
Compare ಯಾಜ 18:3-10ಯಾಜ 18:3-10