Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 18

ಯಾಜ 18:9-22

Help us?
Click on verse(s) to share them!
9ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
10ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
11ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
12ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
13ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
14ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
15ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
16ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
17ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
18ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
19“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
20ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
21“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
22“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.

Read ಯಾಜ 18ಯಾಜ 18
Compare ಯಾಜ 18:9-22ಯಾಜ 18:9-22