Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:16-29

Help us?
Click on verse(s) to share them!
16“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
17“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
18“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
19“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
20“‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
21ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
22ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
23“‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
24ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
25ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
26“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
27“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
28“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
29“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.

Read ಯಾಜ 19ಯಾಜ 19
Compare ಯಾಜ 19:16-29ಯಾಜ 19:16-29