Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:2-14

Help us?
Click on verse(s) to share them!
2“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
3“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
4“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
5“‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
6ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
7ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
8ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
9“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
10ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
11“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
12“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
13“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
14ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

Read ಯಾಜ 19ಯಾಜ 19
Compare ಯಾಜ 19:2-14ಯಾಜ 19:2-14