Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:25-31

Help us?
Click on verse(s) to share them!
25ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
26“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
27“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
28“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
29“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
30“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
31“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

Read ಯಾಜ 19ಯಾಜ 19
Compare ಯಾಜ 19:25-31ಯಾಜ 19:25-31