Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:30-35

Help us?
Click on verse(s) to share them!
30“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
31“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
32“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
33“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
34ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
35“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.

Read ಯಾಜ 19ಯಾಜ 19
Compare ಯಾಜ 19:30-35ಯಾಜ 19:30-35