Text copied!
Bibles in Kannada

ಯಾಜ 19:30-35 in Kannada

Help us?

ಯಾಜ 19:30-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
31 “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
32 “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
33 “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
34 ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
35 “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
ಯಾಜ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019