Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:33-37

Help us?
Click on verse(s) to share them!
33“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
34ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
35“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
36ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
37ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.

Read ಯಾಜ 19ಯಾಜ 19
Compare ಯಾಜ 19:33-37ಯಾಜ 19:33-37