Text copied!
Bibles in Kannada

ಯಾಜ 19:6-10 in Kannada

Help us?

ಯಾಜ 19:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
9 “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
10 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಯಾಜ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019