Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 19

ಯಾಜ 19:7-16

Help us?
Click on verse(s) to share them!
7ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
8ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
9“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
10ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
11“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
12“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
13“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
14ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
15“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
16“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.

Read ಯಾಜ 19ಯಾಜ 19
Compare ಯಾಜ 19:7-16ಯಾಜ 19:7-16